ನವದೆಹಲಿ: ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ಹಗರಣ ವಿರೋಧಿಸಿ ಕರ್ನಾಟಕದ ಬಿಜೆಪಿ ಸದಸ್ಯರು ದೆಹಲಿಯಲ್ಲಿ ಸಂಸತ್ತಿನ ಆವರಣದ ಮುಂದೆ ಪ್ರತಿಭಟನೆ ನಡೆಸಿದರು.
ವಿಧಾನಸಭೆಯಲ್ಲಿ ಪ್ರಕರಣದ ವಿಚಾರಣೆಗೆ ಅವಕಾಶ ನೀಡಲು ಸಿದ್ದರಾಮಯ್ಯ ಸಿದ್ಧರಿಲ್ಲ, ಪ್ರತಿಪಕ್ಷಗಳ ಎಲ್ಲಾ ನಾಯಕರು ಚರ್ಚೆಗೆ ಆಗ್ರಹಿಸುತ್ತಿದ್ದರೂ ವಿಸ್ತೃತ ಚರ್ಚೆಯನ್ನು ನಿರಾಕರಿಸಲಾಗುತ್ತಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಕಾಂಗ್ರೆಸ್ ಜನರಿಂದ 187 ಕೋಟಿ ಲೂಟಿ ಮಾಡಿದೆ, ಧೈರ್ಯವಿದ್ದರೇ ಸಿಬಿಐ ತನಿಖೆಗೆ ಅವಕಾಶ ನೀಡಬೇ̧ಕು ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹಗರಣದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಂಸದರೆಲ್ಲರು ಸೇರಿ ನವದೆಹಲಿಯ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು.