ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜು.೨೭ರ ಶನಿವಾರ ಜಿಲ್ಲೆಯ ಆರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗದ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕುಗಳಲ್ಲಿ ಧಾರಾಕಾರ ಮಳೆ ಯೊಂದಿಗೆ ರಭಸವಾಗಿ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆರು ತಾಲೂಕುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.