ಸಿಎಂ ಮೌನ ನೋವು ತಂದಿದೆ…

0
11
ಭೋವಿ ಅಭಿವೃದ್ಧಿ ನಿಗಮ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ವಿರೋಧಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸಾಂಕೇತಿಕ ಧರಣಿ ನಡೆಸಲಾಯಿತು.

ನನ್ನ ಮೇಲೆ ಹೊರಿಸಿದ್ದ ಭ್ರಷ್ಟಾಚಾರದ ಆರೋಪವನ್ನು ವಾಪಾಸು ಪಡೆಯಿರಿ ಅಥವಾ ಸಿಬಿಐ ತನಿಖೆಗೆ ಆದೇಶಿಸಿ

ಬೆಂಗಳೂರು: ಸಿಎಂ ಮೌನ ನೋವು ತಂದಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿಮರ್ಶೆ ರಾಜ್ಯದ ಜನತೆಗೆ ಬಿಡುತ್ತೇನೆ.”ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದಾಗ ಅವರು ನಿಭಾಯಿಸಿದ ಸಮಾಜ ಕಲ್ಯಾಣ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿತ್ತು ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ಆಗ್ರಹಿಸಿ ಒಂದು ವಾರದ ಗಡುವು ನೀಡಿದ್ದರು. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ವಿನಂತಿ ಮಾಡಿದ್ದೆ. ನನ್ನ ಮೇಲೆ ಹೊರಿಸಿದ್ದ ಭ್ರಷ್ಟಾಚಾರದ ಆರೋಪವನ್ನು ವಾಪಾಸು ಪಡೆಯಿರಿ ಅಥವಾ ಸಿಬಿಐ ತನಿಖೆಗೆ ಆದೇಶಿಸಿ ಎಂದು. ಆದರೆ ಸಿಎಂ ಮೌನ ನೋವು ತಂದಿದೆ. ಹೀಗಾಗಿ ಇಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ಕೂತಿದ್ದಾರೆ.

Previous articleಅರಣ್ಯ ಸಚಿವರ ತವರಲ್ಲೇ ಅರಣ್ಯ ಭೂಮಿ ಒತ್ತುವರಿ
Next articleತುರ್ತು ಪರಿಸ್ಥಿತಿ ಬಗ್ಗೆ ಅರಿವಿದೆಯೇ?