ಚಿಕ್ಕಮಗಳೂರು: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲ್ಲೂಕಿನ ಶಾಲಾ –ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಣೆ ಮಾಡಿದೆ. ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಕಳಸ ಮತ್ತು ಶೃಂಗೇರಿ ತಾಲ್ಲೂಕಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.