ಬಾಗಲಕೋಟೆ: ರಾಜ್ಯಭವನಗಳನ್ನು ದುರುಪಯೋಗಪಡಿಸಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕಾರ್ಯಕ್ಕೆ ಬಿಜೆಪಿ ಕೈ ಹಾಕಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಆರೋಪಿಸಿದ್ದಾರೆ.
ಬೀಳಗಿ ತಾಲೂಕು ಬಾಡಗಂಡಿಯಲ್ಲಿ ಎಸ್.ಆರ್.ಪಾಟೀಲ ಮೆಡಿಕಲ್ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜಸ್ಥಾನ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡುಗಳಲ್ಲಿ ಬಿಜೆಪಿ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಳ್ಳುವುದನ್ನು ಕಂಡಿದ್ದೇವು, ಆದರೆ ಈಗ ಅದು ಕರ್ನಾಟಕಕ್ಕೂ ಕಾಲಿಟ್ಟಿದೆ ಎಂದರು.
ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ನೀಡಿರುವುದನ್ನು ನೋಡಿದರೆ ರಾಜ್ಯಪಾಲರು ವ್ಯಾಪ್ತಿ ಮೀರಿ ಕೆಲಸ ಮಾಡ್ತಾ ಇದ್ದಾರೆ. ಸಂಬಂಧವೇ ಇಲ್ಲದ ವಿಷಯಕ್ಕೆ ನೋಟಿಸ್ ಕೊಟ್ಟಿದ್ದಾರೆ. ಕನಿಷ್ಠ ಕಾನೂನು ಸಲಹೆಯನ್ನೂ ಅವರು ಪಡೆದಂತ್ತಿಲ್ಲ ಎಂದರು.

























