ವಿಷ ಸೇವಿಸಿ‌ ಪ್ರೇಮಿಗಳ‌ ಆತ್ಮಹತ್ಯೆ

0
27

ಬಳ್ಳಾರಿ: ಅಂತರ್ಜಾತಿ ಮದುವೆಗೆ ಪೋಷಕರ ವಿರೋಧಪಡಿಸಿದ್ದಾರೆ ಎನ್ನುವ ಕಾರಣಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿರುಗುಪ್ಪದಲ್ಲಿ ನಡೆದಿದೆ‌.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ರಾಜ (23) ಹಾಗೂ ಪವಿತ್ರ (20) ಮೃತ ದುರ್ಧೈವಿಗಳು ಸಿರಗುಪ್ಪದ ಆದೋನಿ ರಸ್ತೆಯ ಜಮೀನೊಂದರಲ್ಲಿ ವಿಷ ಸೇವಿಸಿದ್ದಾರೆ. ರಾಜ ಹಾಗೂ ಪವಿತ್ರ ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಬಂದು ಹೊರ ಬಂದಿದ್ದ ರಾಜು ಹಾಗೂ ಪವಿತ್ರ. ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleವೇಳಾಪಟ್ಟಿ ಬದಲಿಸಿ ನಮ್ಮ ಕನ್ನಡಿಗರಿಗೆ ಅವಕಾಶ ಕಲ್ಪಿಸಿ
Next articleಪತ್ನಿಯಿಂದಲೇ ಪತಿ ಬರ್ಬರ ಹತ್ಯೆ