ವರ್ಗಾವಣೆ ದಂಧೆಗೆ ಮತ್ತೊಂದು ಬಲಿ

0
27

ಬೆಂಗಳೂರು: ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು Cash For Posting – ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ಕಾಂಗ್ರೆಸ್ ಸರ್ಕಾರ ಪಡೆದುಕೊಂಡಿದೆ. PSI ಪರಶುರಾಮ್ ರವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ಹಣ ನೀಡಿ ನಗರ ಠಾಣೆಗೆ ಪೊಸ್ಟಿಂಗ್ ಪಡೆದುಕೊಂಡಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು, ಇದೀಗ ‌ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸುತ್ತಿದ್ದೇನೆ ಎಂದಿದ್ದಾರೆ.

Previous articleಮೈಸೂರು ಚಲೋ: ಪಾದಯಾತ್ರೆಗೆ ಚಾಲನೆ
Next articleಪಿಎಸ್​ಐ ಸಾವು: ಕುಟುಂಬಸ್ಥರಿಂದ ಗಂಭೀರ ಆರೋಪ