ಹೋಂ ಸ್ಟೇ ದಾಳಿ ಪ್ರಕರಣದ ಆರೋಪಿಗಳು ಖುಲಾಸೆ

0
54

ಮಂಗಳೂರು: ನಗರದಲ್ಲಿ ೧೨ ವರ್ಷಗಳ ಹಿಂದೆ ನಡೆದಿದ್ದ ಮತ್ತು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಇಂದು ಖುಲಾಸೆಗೊಳಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
೨೦೧೨ರ ಜುಲೈ ೨೮ರಂದು ನಗರದ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೆ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ದಾಳಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದರು.
ದಾಳಿಯ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ೪೪ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಮೂವರು ಆರೋಪಿಗಳು ಸಾವನ್ನಪ್ಪಿದ್ದಾರೆ. ಓರ್ವನ ಮೇಲಿನ ಪ್ರಕರಣ ಕೈಬಿಡಲಾಗಿತ್ತು.
ಈ ಪ್ರಕರಣದ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಧೀಶ ಕಾಂತರಾಜು ಪ್ರಕಟಿಸಿದ್ದಾರೆ.

Previous article೧೩ ವರ್ಷದ ಬಾಲಕಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು
Next articleವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಸಾವು: ಪ್ರತಿಭಟನೆ