ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಸಿಸೋಡಿಯಾ ಅವರು ೧೭ ತಿಂಗಳಿನಿಂದ ಬಂಧನದಲ್ಲಿದ್ದು, ಇನ್ನೂ ವಿಚಾರಣೆ ಆರಂಭವಾಗಿಲ್ಲ. ಜಾಮೀನಿನ ತತ್ವವನ್ನು ವಿಚಾರಣಾ ನ್ಯಾಯಾಲಯಗಳು ಮತ್ತು ಹೈಕೋರ್ಟ್‌ಗಳು ಗುರುತಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿತು.