ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆಗಸ್ಟ್ ೨೭ ರಂದು ವಿಶೇಷ ಸಾಂದರ್ಭಿಕ ರಜೆ' ಮಂಜೂರು ಮಾಡಿ ಆದೇಶ ಹೊರಡಿಸಿದೆ. ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್
ಎ’ ಮತ್ತು ಗ್ರೂಪ್ `ಬಿ’ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಆ.೨೭ ರಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಪರೀಕ್ಷೆಗೆ ಅನುವಾಗುವ ೨೧೪ ಸರ್ಕಾರಿ, ೧೮೯ ಅನುದಾನಿತ ಮತ್ತು ೧೬೧ ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ ಒಟ್ಟು ೫೬೪ ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ ವಿಶೇಷ, ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಪರೀಕ್ಷಾ ಉಪ ಕೇಂದ್ರಗಳಲ್ಲಿ ಅಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು-ಆಡಳಿತ ಮಂಡಳಿಯು ಖಾತರಿ ಪಡಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಈ ಆದೇಶವನ್ನು ಅನುಷ್ಠಾನಗೊಳಿಸಲು ತಿಳಿಸಿದೆ.