Home Advertisement
Home ತಾಜಾ ಸುದ್ದಿ ನಮ್ಮ ಮೆಟ್ರೋ ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ಸಂಚಾರ ವ್ಯತ್ಯಯ

0
67

ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್‌ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.


ಈ ಕೆಳಗಿನ ವಿವರಗಳಂತೆ,
ಪೀಣ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಸ್ಥಗಿತ: ದಿನಾಂಕ 20, 23, 30ನೇ ಆಗಸ್ಟ್ 2024 ಹಾಗೂ 6 ಮತ್ತು 11ನೇ ಸೆಪ್ಟೆಂಬರ್ 2024 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.
ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ ಇಂಡಸಿ ಕಡೆಗೆ: ದಿನಾಂಕ 24ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ. ಹಾಗೂ ದಿನಾಂಕ 25ನೇ ಆಗಸ್ಟ್ 2024 ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭವಾಗಲಿದೆ.
ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ: 1) ದಿನಾಂಕ 24ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಕ್ಕೆ ಪ್ರಾರಂಭವಾಗಲಿದೆ. 2) ದಿನಾಂಕ 25ನೇ ಆಗಸ್ಟ್ 2024 ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 05.00 ಕ್ಕೆ ಪ್ರಾರಂಭವಾಗಲಿದೆ.
ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ

Previous articleಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ
Next articleಸುದ್ದಿಗೋಷ್ಠಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ಕಾಂಗ್ರೆಸ್‌ ಕಾರ್ಯಕರ್ತ ಸಾವು