ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸೇತುವೆಯ ಮೇಲೆ ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ,
ಆಗಸ್ಟ್ 19 ರಂದು ಎಲೆಕ್ಟ್ರಾ ನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯ ಕೋನಪ್ಪನ ಅಗ್ರಹಾರ ಮೇಲ್ಸೇತುವೆ ಮೇಲೆ ಆ್ಯಂಬುಲೆನ್ಸ್‌ಗೆ ದಾರಿ ಬಿಡಲು ಹೋಗಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ, ವೇಗವಾಗಿ ಬಂದ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವಾಗ ಕಾರು ಚಾಲಕ ಕೊಂಚ ಎಡಭಾಗಕ್ಕೆ ತಿರುಗಿಸಿದ್ದಾನೆ. ಆಗ ಹಿಂದೆ ಬರುತ್ತಿದ್ದ ಆ್ಯಂಬುಲೆನ್ಸ್ ಕಾರಿಗೆ ತಗುಲಿದ್ದು. ಅಪಘಾತದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಡೀ ಘಟನೆಯು ಮುಂದೆ ಸಾಗುತ್ತಿದ್ದ ಕಾರಿನ ಹಿಂಬದಿಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಸ್ಪಷ್ಟ ನೋಟವನ್ನು ನೀಡಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ, ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.