ನವದೆಹಲಿ: ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಕೊಡುವ ಜಾಹೀರಾತನ್ನು ರದ್ದುಗೊಳಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಕೇಂದ್ರ ಲೋಕಸೇವಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಕಳೆದ ಶನಿವಾರ ಕೇಂದ್ರ ಲೋಕಸೇವಾ ಆಯೋಗವು ಕೇಂದ್ರ ಸರ್ಕಾರದಲ್ಲಿನ ವಿವಿಧ ಹಿರಿಯ ಹುದ್ದೆಗಳಿಗೆ ಲ್ಯಾಟರಲ್ ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ‘ಪ್ರತಿಭಾವಂತ ಮತ್ತು ಉತ್ಸಾಹಿ ಭಾರತೀಯ ಪ್ರಜೆ’ಗಳಿಗಾಗಿ ಜಾಹೀರಾತು ನೀಡಿತ್ತು. 24 ಸಚಿವಾಲಯಗಳ ಜಂಟಿ ಕಾರ್ಯದರ್ಶಿ, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿ ಸೇರಿದಂತೆ ಒಟ್ಟು 45 ಹುದ್ದೆಗಳಿಗೆ ನೇಮಕಾತಿಗೆ ಕೇಂದ್ರ ಮುಂದಾಗಿತ್ತು.