ಬಿಸಿಯೂಟ ಸೇವಿಸಿ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

0
20

ಕುಷ್ಟಗಿ: ಅಕ್ಷರದಾಸೋಹ ಯೋಜನೆ ಮಧ್ಯಾಹ್ನದ ಬಿಸಿಯೂಟ ಸೇವಿಸಿ ೧೦೦ಕ್ಕೂ ಅಧಿಕ ವಿದ್ಯಾರ್ಥಿಗಳು ವಾಂತಿ–ಭೇದಿಯಿಂದ ಬಳಲಿ ಸುಸ್ತಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದೆ.
ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡುಗೆ ಸಿಬ್ಬಂದಿ ನಿರ್ಲಕ್ಷತನದಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿಗಳನ್ನು ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿ
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ. ನಂತರ
ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಉಂಟಾಗಿದೆ.

Previous articleಅಣಬೆ ತಿಂದು ಐವರು ಅಸ್ವಸ್ಥ
Next articleನಮ್ಮ ಎಲ್ಲ ಆರೋಪಗಳಿಗೆ ಪುರಾವೆ ಸಿಕ್ಕಿವೆ