ಕಾರ್ಕಳ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

0
13

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಇದು ಅತ್ಯಂತ ಖಂಡನೀಯ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದ ಅಧಿಕಾರಿಗಳು ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕೂಡಲೆ ಘಟನೆ ನಡೆದ ಕೂಲಂಕಷ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ; ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಯಿತು. ಪ್ರಕರಣಕ್ಕೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ; ಸಂಬಂಧ ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಯಾವುದೇ ಭಯವಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಕ್ಕೆ ನಿರ್ದೇಶನ ನೀಡಲಾಗಿದೆ. ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ; ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದಿದ್ದಾರೆ

Previous articleಗೃಹಲಕ್ಷ್ಮೀ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ
Next articleಊರಿಗೆ ಊಟ ಹಾಕಿದ ಅಜ್ಜಿಗೆ ನನ್ಯಾಕ್‌ ಕರಿಲಿಲ್ಲ ಎಂದ ಹೆಬ್ಬಾಳ್ಕರ್