ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ

0
12

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

Previous articleಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ
Next articleಪ್ರಸಾದ ಸೇವಿಸಿ ಮೂವರು ಸಾವು, ಹಲವರು ಅಸ್ವಸ್ಥ