ಗಲಭೆ ಅಂದರೆ ಯಾಕಿಷ್ಟು ವ್ಯಾಮೋಹ?

0
9

ಅಧಿಕಾರ ಯಾರೊಬ್ಬರ ಸ್ವತ್ತಲ್ಲ, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ನೆಲದ ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು

ಬೆಂಗಳೂರು: ರಾಜ್ಯಪಾಲರ ಮೇಲೆ ಬಾಂಗ್ಲಾದೇಶದ ಮಾದರಿಯಲ್ಲಿ ಕಲ್ಲು ತೂರಾಟ ಮಾಡಿ ದಾಳಿ ಮಾಡುತ್ತೇವೆ ಎಂದು ನಾಲಿಗೆ ಹರಿಬಿಟ್ಟಿದ್ದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಹೇಳಿಕೆ ಬೆನ್ನಲ್ಲೇ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಾಂಗ್ಲಾದೇಶದ ರೀತಿಯಲ್ಲಿ ಪ್ರಧಾನಿ ಮೋದಿ ಅವರ ಮೇಲೆ ದಾಳಿ ಮಾಡುತ್ತೇವೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​​. ಅಶೋಕ್​ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಚುನಾಯಿತ ಜನಪ್ರತಿನಿಧಿಗಳು, ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಜನಪ್ರತಿನಿಧಿಗಳು ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತಿರುವವರ ವಿರುದ್ಧ ಈ ರೀತಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ? ಕರ್ನಾಟಕ ಕಾಂಗ್ರೆಸ್‌ ಪಕ್ಷಕ್ಕೆ ಬಾಂಗ್ಲಾದೇಶ, ಪಾಕಿಸ್ತಾನ ಮಾದರಿಯ ಆರಾಜಕತೆ, ಗಲಭೆ ಅಂದರೆ ಯಾಕಿಷ್ಟು ವ್ಯಾಮೋಹ? ಕರ್ನಾಟಕ ಶಾಂತಿಯಿಂದ ಇರುವುದನ್ನ, ಕನ್ನಡಿಗರು ನೆಮ್ಮದಿಯಿಂದ ಇರುವುದನ್ನ, ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲವೆ? ಅಧಿಕಾರ ಯಾರೊಬ್ಬರ ಸ್ವತ್ತಲ್ಲ, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ನೆಲದ ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು ಎಂದಿದ್ದಾರೆ.

Previous articleಬಳ್ಳಾರಿ ಜೈಲು ಮುಂದೆ ಜಮಾಯಿಸಿದ ದರ್ಶನ್ ಅಭಿಮಾನಿಗಳು
Next articleಪಡಿತರದಲ್ಲಿ ಪ್ಲಾಸ್ಟಿಕ್‌ ಅಕ್ಕಿ: ಸ್ಪಷ್ಟನೆ ನೀಡಿದ ಆಹಾರ ಇಲಾಖೆ