ಬೆಂಗಳೂರು: ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತು ಹೈಕೋರ್ಟ್ ವಿಚಾರಣೆ ನಡೆಸಿ ಸಿಬಿಐ ತನಿಖೆಯನ್ನು ರದ್ದು ಮಾಡಿದ್ದ ಕ್ಯಾಬಿನೆಟ್ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಬಿ ಎಸ್ ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಆದೇಶಿಸಿದ್ದ ಆದೇಶ ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್. ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಮೇಲ್ಮನವಿ ಕುರಿತು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ತೀರ್ಪು ನೀಡಿದೆ. ಈ ಪ್ರಕರಣ ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಆದೇಶ ನೀಡಿದೆ.