ಭಾರತಕ್ಕೆ ಐದನೇ ಪದಕ: ರುಬಿನಾ ಫ್ರಾನ್ಸಿಸ್‌ಗೆ ಕಂಚು

ಪ್ಯಾರಿಸ್: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಐದನೇ ಪದಕ ಲಭಿಸಿದೆ.
ಪ್ಯಾರಿಸ್ ನಲ್ಲಿ ನಡೆಯುತ್ತಿರುವ #Paralympics ಕ್ರೀಡಾಕೂಟದ ಮೂರನೇ ದಿನವಾದ ಇಂದು ಭಾರತೀಯರ ಪದಕ ಬೇಟೆ ಮುಂದುವರಿದಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್​ಹೆಚ್ 1 ಫೈನಲ್​ನಲ್ಲಿ ಭಾರತದ ರುಬಿನಾ ಫ್ರಾನ್ಸಿಸ್ 211.1 ಅಂಕ ಸಂಪಾಧಿಸಿ ಕಂಚಿನ ಪದಕ ತಂದುಕೊಟ್ಟರು. ಇವರಿಗೂ ಮೊದಲು ಭಾರತದ ಶೂಟರ್ ಅವನಿ ಲೇಖರ ಚರಿತ್ರೆ ಸೃಷ್ಟಿಸಿದ್ದಾರೆ. ಸತತ ಎರಡು ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಏಕೈಕ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅವನಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾರತದ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದರು. 100 ಮೀಟರ್ ಟಿ35 ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್​ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. ಪುರುಷರ ಶೂಟಿಂಗ್‌ ವಿಭಾಗದಲ್ಲಿ ಮನೀಷ್ ನರ್ವಾಲ್‌ ಬೆಳ್ಳಿ ಪದಕ ಗೆದ್ದಿದ್ದಾರೆ.