ಪವಿತ್ರಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಅವರ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಶನಿವಾರ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.