ಬೆಂಗಳೂರು: ಕೋಚಿಂಗ್ ಸೆಕ್ಟರ್‌ನಲ್ಲಿ ದಾರಿತಪ್ಪಿಸುವ ಜಾಹೀರಾತು ಮಾರ್ಗಸೂಚಿ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಕೇಂದ್ರೀಯ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಯಿಂದ ಪ್ರಸ್ತಾವಿತ ‘ಕೋಚಿಂಗ್ ಸೆಕ್ಟರ್‌ನಲ್ಲಿ ದಾರಿತಪ್ಪಿಸುವ ಜಾಹೀರಾತುಗಳಿಗಾಗಿ ಮಾರ್ಗಸೂಚಿ’ಗಳನ್ನು ಪರಿಶೀಲಿಸಲು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆನು. ಕೋಚಿಂಗ್ ಸಂಸ್ಥೆಗಳಿಂದ ಮೋಸಗೊಳಿಸುವಂಥ ಜಾಹೀರಾತು ಅಭ್ಯಾಸಗಳನ್ನು ತಡೆಯುವ ಗುರಿಯನ್ನು ಹೊಂದಿರುವುದರಿಂದ ಗ್ರಾಹಕರು, ಅದರಲ್ಲೂ ವಿದ್ಯಾರ್ಥಿ ಸಮುದಾಯದ ಹಕ್ಕುಗಳನ್ನು ಸಂರಕ್ಷಿಸಲು ಈ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ನಾವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.