ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ

0
30

ಬೆಂಗಳೂರು: ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್‌ ಸರಕಾರ ಅನ್ನದಾತನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. (ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದಿದ್ದಾರೆ.

Previous articleಕಡೇಚೂರ್ ಕೈಗಾರಿಕಾ ಪ್ರದೇಶಕ್ಕೆ ಸಚಿವ ಸೋಮಣ್ಣ ಭೇಟಿ, ಪರಿಶೀಲನೆ
Next articleಅಶ್ಲೀಲ ಸಂದೇಶ ಕಳುಹಿಸಿದ್ದು ನಿಜ