ರಾಯಚೂರು: ಲೋ ಬಿಪಿಯಿಂದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದ್ದು ಮೃತ ವಿದ್ಯಾರ್ಥಿ ತರುಣ್ ಕುಮಾರ (14), ವಿದ್ಯಾವಾಹಿನಿ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ, ಎಂದಿನಂತೆ ಶಾಲೆಗೆ ಆಗಮಿಸಿ ತರಗತಿಯಲ್ಲಿ ಕುಳಿತಿದ್ದ. ಶಾಲೆಯಲ್ಲಿ ಏಕಾಎಕಿ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನುಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.