ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸಿ

0
18

ಬೆಂಗಳೂರು: ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವರು ಇಂದು ತಮ್ಮ ಬೆಂಗಳೂರು ಸಿಟಿ ರೌಂಡ್ಸ್‌ನ ಭಾಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಈ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Previous articleಎಟಿಎಂ ಕಾರ್ಡ ಅದಲಿ ಬದಲಿ: ಹಣ ತೆಗೆದುಕೊಂಡು ಮೋಸ
Next articleಕೋಮು ಸೌಹಾರ್ದತೆ ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ