ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಾಲ್ಕು ಬ್ಲಾಕ್ ಸ್ಪಾಟ್‌ ವೀಕ್ಷಿಸಿದ ಡಾ. ಸಿ ಎನ್ ಮಂಜುನಾಥ್

0
32

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ -44ರಲ್ಲಿ ಚಂದಾಪುರದಿಂದ ಅತ್ತಿಬೆಲೆವರೆಗೆ ಬರುವ ಬ್ಲಾಕ್ ಸ್ಪಾಟ್‌ಗಳನ್ನು ಸಂಸದ ಡಾ. ಸಿ ಎನ್ ಮಂಜುನಾಥ್ ವೀಕ್ಷಿಸಿ ಪರಿಹಾರಗಳನ್ನು ಜಾರಿಗೊಳಿಸಲು ಸೂಕ್ತ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಅನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚಂದಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಗ್ಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಚಂದಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಕಾರಣ ನಾಲ್ಕು ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದೆ. ಈ ಸಮಸ್ಯೆಯನ್ನು ನಿವಾರಿಸಲು,
➡️ ಮೇಲ್ಸೇತುವೆ ಮತ್ತು ರಸ್ತೆ ನಿರ್ಮಾಣಕ್ಕೆ ₹160 ಕೋಟಿ ಮತ್ತು
➡️ ಚಂದಾಪುರ ರೈಲ್ವೆ ಕೆಳಸೇತುವೆ ಅಗಲೀಕರಣಕ್ಕೆ ₹60 ಕೋಟಿ ವೆಚ್ಚದ ಟೆಂಡರ್‌ಗಳನ್ನು ಕರೆಯಲಾಗಿದೆ. ಚಂದಾಪುರ ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ವಾಹನ ಸಂಚಾರ ಹೆಚ್ಚಾಗಿದೆ. ಚಂದಾಪುರ-ಅತ್ತಿಬೆಲೆ ರಸ್ತೆಯಲ್ಲಿ ಭಾರಿ ವಾಹನಗಳು ಸಂಚರಿಸುವುದು ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ದಿನನಿತ್ಯ ರಸ್ತೆಯನ್ನು ಬಳಸುವುದು ವಾಹನ ದಟ್ಟಣೆಗೆ ಕಾರಣವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡುತ್ತಾ, ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.

Previous articleನಾಗಮಂಗಲ ಪ್ರಕರಣ: ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ
Next articleನಾಪತ್ತೆಯಾಗಿದ್ದ ಪ್ರವಾಸಿಯ ಮೃತದೇಹ ಪತ್ತೆ