ಹುಲುನ್‌ಬುಯರ್: ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶನಿವಾರ ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆದ ಹೈವೋಲ್ಟೇಜ್ ಪಂದ್ಯ ಚಾಂಪಿಯನ್ ಆಟವನ್ನು ಮುಂದುವರೆಸಿದ ಹರ್ಮನ್‌ಪ್ರೀತ್ ನಾಯಕತ್ವದ ಭಾರತ ಹಾಕಿ ತಂಡ, ಪಾಕಿಸ್ತಾನ ತಂಡವನ್ನು ೨-೧ ಗೋಲುಗಳಿಂದ ಮಣಿಸಿ ಸತತ ಐದನೇ ಜಯ ದಾಖಲಿಸಿತು.
ಈ ಜಯದೊಂದಿಗೆ ಭಾರತ ಹಾಕಿ ತಂಡ ಅಜೇಯ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಚೀನಾದಲ್ಲಿ ನಡೆಯುತ್ತಿರುವ ಈ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ ನೀಡಿ ಸತತ ಐದನೇ ಗೆಲುವು ಸಾಧಿಸಿತು. ಈ ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಪೆನಾಲ್ಟಿ ಕಾರ್ನರ್ ಮೂಲಕ ೨ ಗೋಲು ಗಳಿಸಿದ ಭಾರತದ ನಾಯಕ ಹರ್ಮನ್‌ಪ್ರೀತ್ ಸಿಂಗ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರೆ, ಆರಂಭದಲ್ಲೇ ಗೋಲು ದಾಖಲಿಸಿ ಭಾರತಕ್ಕೆ ತಿರುಗೇಟು ನೀಡಿದ್ದ ಪಾಕಿಸ್ತಾನ ಅಂತಿಮವಾಗಿ ಪಂದ್ಯವನ್ನು ೨-೧ ಅಂತರದಿಂದ ಕಳೆದುಕೊಂಡಿತು.