ಭಾರತಕ್ಕೆ 227 ರನ್​ಗಳ ಮುನ್ನಡೆ

ಚೆನ್ನೈ: ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್​ನ ಇನ್ನಿಂಗ್ಸ್​ನಲ್ಲಿ ಪ್ರವಾಸಿ ಬಾಂಗ್ಲಾದೇಶ ತಂಡ 149 ರನ್​ಗಳಿಗೆ ಆಲೌಟ್ ಆಗಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಪಡೆ 376 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದ್ದ ಟೀಂ ಇಂಡಿಯಾ ಎರಡನೇ ದಿನದಾಟದ ಮೊದಲ ಸೆಷನ್​ನಲ್ಲೇ ಕೇವಲ 37 ರನ್ ಕಲೆಹಾಕಿ ಉಳಿದ 4 ವಿಕೆಟ್​ಗಳನ್ನು ಕಳೆದುಕೊಂಡಿತು. ಭಾರತ ನೀಡಿರುವ 376ರನ್‌ಗಳ ಗುರಿ ಬೆನ್ನು ಹತ್ತಿರುವ ಬಾಂಗ್ಲಾದೇಶ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ತಂಡ 149 ರನ್​ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಂ ಇಂಡಿಯಾಗೆ ಮೊದಲ ಇನ್ನಿಂಗ್ಸ್​ನಲ್ಲಿ 227 ರನ್​ಗಳ ಮುನ್ನಡೆ ಸಿಕ್ಕಿದೆ.