ಚಕ್ರವರ್ತಿ ಜೀವನ ಸಾಧನೆ ಪ್ರೇರಣೆಯಾಗಲಿ

0
35

ಬೆಂಗಳೂರು: ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳು ತಿಳಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ತಮ್ಮ ಮನೋಜ್ಞ ಅಭಿನಯ, ಅಮೋಘ ನೃತ್ಯದ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ ಮಿಥುನ್ ಚಕ್ರವರ್ತಿ ಈ ಗೌರವಕ್ಕೆ ಅತ್ಯಂತ ಅರ್ಹರು. ಇವರ ಜೀವನ ಸಾಧನೆ ಯುವ ನಟ – ನಟಿಯರಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Previous articleಸಾರಿಗೆ ಸಂಸ್ಥೆ ಬಸ್ ಪಲ್ಟಿ: ಹಲವರಿಗೆ ಗಾಯ
Next articleಬಳ್ಳಾರಿ ಪ್ರವೇಶಕ್ಕೆ ಜನಾರ್ದನ ರೆಡ್ಡಿಗೆ ಅನುಮತಿ ನೀಡಿದ ಸುಪ್ರೀಂಕೋರ್ಟ್