ಭಾಗಲ್ಪುರ:ಬಿಹಾರದ ಭಾಗಲ್ಪುರ್ ಜಿಲ್ಲೆಯ ಕಸದ ಡಂಪ್ ಬಳಿ ಸಂಭವಿಸಿದ ಸ್ಫೋಟದಲ್ಲಿ ಏಳು ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ ಮೂವರು ಗಂಭೀರವಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಟ್ಟಣದ ಹಬೀಬ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಿಲಾಫತ್ ನಗರ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಮಕ್ಕಳು ಕಸದ ರಾಶಿಯ ಬಳಿ ಆಟ ಆಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಏಳು ಮಕ್ಕಳಲ್ಲಿಮೂವರ ಸ್ಥಿತಿ ಚಿಂತಾಜನಕವಾಗಿದೆ, ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ವಿಧಿವಿಜ್ಞಾನ ತಜ್ಞರು ಧಾವಿಸಿದ್ದು, ಸ್ಫೋಟದ ವಸ್ತುಗಳನ್ನು ನಿಷ್ಕ್ರಿಯಗೊಳಿಸಲು ಹಾಗೂ ಸ್ಫೋಟದ ವಸ್ತು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ,