ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ, ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಗೆ ಮೈತ್ರಿ ಪಕ್ಷ ಜೆಡಿಎಸ್ ಬೆಂಬಲ ಸೂಚಿಸಿದೆ.