ಚಿಕ್ಕೋಡಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೋರ್ವಳು ತನ್ನ ಹದಿನೇಳು ತಿಂಗಳ ಪುತ್ರನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗಾಯತ್ರಿ ವಾಗಮೋರೆ(೨೬) ಹಾಗೂ ಮಗುವನ್ನು ಕುಶಲ ವಾಗಮೋರೆ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ ಘಟನೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಬಾವಿಯಿಂದ ಶವ ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಶವಗಳ ರವಾನೆ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.