ಸ್ನೇಹಮಯಿ ಕೃಷ್ಣ ವಿರುದ್ಧ ವಾರೆಂಟ್..!

ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಅರೆಸ್ಟ್ ವಾರೆಂಟ್‌ ಜಾರಿಯಾಗಿದೆ.
ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಮೈಸೂರು ನ್ಯಾಯಾಲಯ ಜಾರಿಗೊಳಿಸಿದೆ, 9 ವರ್ಷ ಹಳೆ ಪ್ರಕರಣದ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ.
ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಇಂದು ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.
30 ಜೂನ್ 2015ರಲ್ಲಿ ಎನ್.ಕುಮಾರ್‌ ಎನ್ನುವವರು ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು.