ದಲಿತ ಮುಖ್ಯಮಂತ್ರಿ ಇತ್ಯಾದಿ ವಿಚಾರಗಳು ಸದ್ಯಕ್ಕೆ ಅಪ್ರಸ್ತುತ

0
21

ಹುಬ್ಬಳ್ಳಿ: ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ದಲಿತ ಮುಖ್ಯಮಂತ್ರಿ ಇತ್ಯಾದಿ ವಿಚಾರಗಳು ಸದ್ಯಕ್ಕೆ ಅಪ್ರಸ್ತುತ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯದವರಿಗೂ ತಮ್ಮ ಸಮುದಾಯದವರು ಮುಖ್ಯಮಂತ್ರಿಯಾಗಬೇಕು ಎನ್ನುವ ಬಯಕೆ ಇರುವುದು ಸಹಜ ಎಂದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಯಾವುದೇ ತಪ್ಪು ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲವಾಗಿ ನಿಂತಿದೆ. ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಬಿಜೆಪಿಯವರು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಹಾಗಾದರೇ ಕೇಂದ್ರದಲ್ಲಿರುವ ಶೇ. ೩೦ರಷ್ಟು ಮಂತ್ರಿಗಳ ಮೇಲೆ ಬಹಳ ಗಂಭೀರವಾದ ಪ್ರಕರಣಗಳಿವೆ. ಅದಕ್ಕೂ ಇದಕ್ಕೂ ತಾಳೆ ಮಾಡಲು ಬರುವುದಿಲ್ಲ. ಹಾಗೆ ನೋಡಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಚಿವರಾಗೋಕೆ ಬರುವುದಿಲ್ಲ ಎಂದು ಹೇಳಿದರು.

Previous articleಜಾತಿಗಣತಿ ವರದಿ ಮೊದಲು ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ
Next articleಸೈಟ್ ವಾಪಸ್ ಕೊಟ್ಟಿದ್ದಕ್ಕೆ ಆಪಾದನೆ ರದ್ದಾಗಲ್ಲ