ಗೃಹಲಕ್ಷ್ಮೀಯಿಂದ ಊರಿಗೆ ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾದ ಮಲ್ಲವ್ವ

0
15

ರಾಯಬಾಗ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಒಂದಾಗಿದೆ. ಈ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೂ 2,000 ರೂಪಾಯಿ ನೀಡಲಾಗುತ್ತಿದ್ದು, ಇದರಿಂದಾಗಿ ಮಹಿಳೆಯರು ಮನೆ ಖರ್ಚುಗಳನ್ನು ನಿಭಾಯಿಸುತ್ತಿದ್ದಾರೆ. ಹಾಗೆಯ ಇದೀಗ ಇದೇ ಹಣದಿಂದ ತಮ್ಮ ಗ್ರಾಮದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ.
ತಾಲ್ಲೂಕಿನ ಮಂಟೂರ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಎಂಬ ಮಹಿಳೆ ತನಗೆ ಬಂದಿರುವ 11 ಕಂತುಗಳ ಗೃಹಲಕ್ಷ್ಮಿ ಹಣ ಹಾಗೂ ತನ್ನ ಗ್ರಾಮ ಪಂಚಾಯತಿ ಸದಸ್ಯೆಯ ಗೌರವ ಧನ ಸೇರಿಸಿ ಸುಮಾರು ₹45 ಸಾವಿರ ಮೌಲ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸ್ಪರ್ಧಾರ್ಥಿಗಳಿಗೆ ಪುಸ್ತಕಗಳನ್ನು ಕೊಂಡು ಪುತ್ರ ನಾಗಪ್ಪ ಮೇಟಿಗೆ ಕೈ ಜೋಡಿಸಿ ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ. ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಹಲವಾರು ವಿಘ್ನಗಳು ಎದುರಾದರೂ ನಾನು ಹಾಗೂ ನನ್ನ ಮಗ ಧೃತಿಗೆಡದೇ ಈ ಚಿಕ್ಕದಾದ ಚೂಕ್ಕದಾದ ಗ್ರಂಥಾಲಯ ನಿರ್ಮಾಣ ಮಾಡಿದ್ದೇವೆ. ಇದಕ್ಕೆ ನಾಗಪ್ಪ ಅವರ ಗೆಳೆಯರು ಕೂಡ ಸಾಥ್ ನೀಡಿದ್ದಾರೆ ಎಂದು ಮಲ್ಲವ್ವ ಸಂಯುಕ್ತ ಕರ್ನಾಟಕಕ್ಕೆ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ಮಲ್ಲವ್ವ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮೂಲಕ ಹಣ ಹಾಕುವದರಿಂದ ಸಾಕಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅವರ ಸೇವೆ ಹೀಗೆ ಮುಂದುವರೆಯಲಿ. ತಾಯಿ ಚಾಮುಂಡಿ ದೇವಿಯ ಆಶಿರ್ವಾದ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮೇಲಿರಲಿ ಎಂದು ಹಾರೈಸಿದ್ದಾರೆ.

Previous articleಸಿಎಂ ವಾಹನಕ್ಕೆ ಘೆರಾವು ಯತ್ನ: ಟೆಂಗಿನಕಾಯಿ ಸೇರಿ ನೂರಾರು ಬಿಜೆಪಿ ಕಾರ್ಯಕರ್ತರ ಬಂಧನ
Next articleಕನ್ನಡಿಗರಿಗೆ ಇದು ಅನ್ಯಾಯವಲ್ಲವೇ?