ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ

0
21

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮರಿಗೌಡಗೆ ಸೂಚಿಸಿತ್ತು. ಮರಿಗೌಡ ವಿರುದ್ಧವೂ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಈ ಬೆಳವಣಿಗೆ ಬೆನ್ನಲ್ಲೇ ಕೆ.ಮರಿಗೌಡ ರಾಜೀನಾಮೆ ನಿಡಿದ್ದಾರೆ.

Previous articleನನ್ನ ಪಾತ್ರವೇ ಇಲ್ಲ, ಇನ್ನೂ ಅವರದು…
Next articleನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ