ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೂತನ ಕಾರ್ಯದರ್ಶಿಯಾಗಿ ರಮಣದೀಪ್ ಚೌದರಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಲ್. ಸ್ನೇಹಲ್ ಸುಧಾಕರ್ ಅವರನ್ನು ಕೆಪಿಎಸ್‌ಸಿಯ ಜಂಟಿ ಪರೀಕ್ಷಾ ನಿಯಂತ್ರಕರಾಗಿ ನೇಮಕಗೊಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಕೆ. ರಾಕೇಶ್ ಕುಮಾರ್ ಅವರಿಗೆ ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು. ಅವರನ್ನು ಹೆಚ್ಚುವರಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.