ವಿಜಯನಗರ: ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಮಹಿಳೆಯೋರ್ವಳು ಮೃತಪಟ್ಟು ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ನಡೆದಿದೆ.
ಸುತ್ತೂರು ಗ್ರಾಮದ ಹನುಮಕ್ಕ(45) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಬಸ್ ಉರುಳಿ ಬಿದ್ದಿದ್ದು, ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


























