ಕೈಗಾ ಉದ್ಯೋಗಿಗಳನ್ನು ಕೊಂಡೊಯ್ಯುತ್ತಿದ್ದ ಬಸ್​ ಬೆಂಕಿಗಾಹುತಿ : ಉದ್ಯೋಗಿಗಳು ಪಾರು

0
19

ಕಾರವಾರ: ಕೈಗಾ ಅಣುವಿದ್ಯುತ್ ಸ್ಥಾವರದ ಉದ್ಯೋಗಿಗಳನ್ನು ಕರೆದೊಯ್ಯುವ ಖಾಸಗಿ ಬಸ್‌ವೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕಾರವಾರ ತಾಲ್ಲೂಕಿನ ವಿರ್ಜೆ ಗ್ರಾಮದ ಬಳಿ ಈ ಘಟನೆ ಮುಂಜಾನೆ ನಡೆದಿದೆ. ಬಸ್‌ನಲ್ಲಿದ್ದ ಉದ್ಯೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೈಗಾದಿಂದ ಕದ್ರಾದಲ್ಲಿರುವ ಕೈಗಾ ಉದ್ಯೋಗಿಗಳ ಟೌನ್‌ಶಿಪ್‌ಗೆ ಖಾಸಗಿ ಬಸ್ ಮೂಲಕ ಸಿಬ್ಬಂದಿಯನ್ನು ಕರೆತರಲಾಗುತ್ತಿತ್ತು. ಬಸ್ ವಿರ್ಜೆ ಗ್ರಾಮದ ಬಳಿ ಬರುತ್ತಿದ್ದ ವೇಳೆ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಬಸ್ ನಿಲ್ಲಿಸಿದ ಚಾಲಕ ಎಲ್ಲರನ್ನೂ ಕೆಳಗಿಳಿಸಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ, ಅದೃಷ್ಟವಶಾತ್ ಕೈಗಾ ಉದ್ಯೋಗಿಗಳು ಅಗ್ನಿಅವಘಡದಿಂದ ಪಾರಾಗಿದ್ದು, ಕೈಗಾ ಅಣುವಿದ್ಯುತ್ ಸ್ಥಾವರದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕದ್ರಾ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Next articleಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಮನವಿ