ಹಾಸನ: ಗಡ್ಡ ತೆಗೆಯುವಂತೆ ಸೂಚನೆ ನೀಡಿದ ಕಾಲೇಜು ಆಡಳಿತ ಮಂಡಳಿ ವಿರುದ್ಧ ಜಮ್ಮುಕಾಶ್ಮೀರದ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಪತ್ರ ಬರೆದಿರುವ ವಿದ್ಯಾರ್ಥಿಗಳು, ಸಂಪ್ರದಾಯದಂತೆ ಗಡ್ಡ ಬಿಡುವುದು ನಮ್ಮ ಹಕ್ಕು. ಗಡ್ಡ ತೆಗೆಯುವಂತೆ ಸೂಚನೆ ನೀಡಿದ್ದು, ನಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.