Home Advertisement
Home ತಾಜಾ ಸುದ್ದಿ ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

0
139

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಸೋಮವಾರ ಉಭಯ ಸಚಿವರು ಭೇಟಿ ಮಾಡಿ ಕೋವಿಡ್ ಹಗರಣಗಳ ತನಿಖೆ ನಡೆಸಿ ವರದಿ ನೀಡಿರುವ ನಿವೃತ್ತ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುವಂತೆ ಮನವಿ ಮಾಡಿದರು. ಇನ್ನು ಈ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದು, ಪ್ರಲ್ಹಾದ್ ಜೋಶಿ ಹೇಳಿಕೆ ಖಂಡಿಸಿ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದೇವೆ. ನ್ಯಾಯಾಂಗ ತನಿಖಾ ಆಯೋಗದ‌ ಬಗ್ಗೆ ಹಾಗೂ ನಿವೃತ್ತ ನ್ಯಾಯಾಧೀಶರ ಬಗ್ಗೆ ನಿಂದಿಸಿ ಕೆಟ್ಟದಾಗಿ ಮಾತನಾಡಿದ್ದಾರೆ. ಮೈಕಲ್ ಡಿಕುನ್ಹಾ ನ್ಯಾಯಾಧೀಶರಲ್ಲ, ಬದಲಾಗಿ ರಾಜಕೀಯ ಏಜೆಂಟ್ ಎಂದು ಜೋಶಿ ಹೇಳಿದ್ದಾರೆ. ಕೋವಿಡ್ ಕುರಿತಾಗಿ ಅವರು ಸಲ್ಲಿಸಿರುವ ವರದಿ ದುರುದ್ದೇಶದಿಂದ ಹಾಗೂ ಚುನಾವಣಾ ದೃಷ್ಟಿಯಿಂದ ನೀಡಿದ್ದಾರೆ ಎಂದೂ ಆರೋಪ ಮಾಡಿದ್ದಾರೆ. ಜೋಶಿಯವರು ಸಾಮಾನ್ಯ ವ್ಯಕ್ತಿಯಲ್ಲ, ಕೇಂದ್ರ ಸಚಿವರು. ಸಂವಿಧಾನದಲ್ಲಿ ಸ್ವಾಯತ್ತ ಸಂಸ್ಥೆಗಳು, ಆಯೋಗಗಳ ಬಗ್ಗೆ ವೈಯುಕ್ತಿಕ ಟೀಕೆ ಸರಿಯಲ್ಲ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾದದ್ದು. ಕಾನೂನು ಬಾಹಿರವೂ ಹೌದು. ನ್ಯಾಯಾಂಗ ತನಿಖಾ ಆಯೋಗದ ವಿರುದ್ಧ ಸಂಶಯ ಪಡುವಂತಿಲ್ಲ. ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿ, ಆದರೆ ನ್ಯಾಯಾಧೀಶರ ಬಗ್ಗೆ ಟೀಕಿಸಬಾರದು ಎಂದರು.

Previous articleಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ
Next articleಅರ್ಧಕ್ಕೆ ಭಾಷಣ ನಿಲ್ಲಿಸಿ ಹೊರನಡೆದ ಯತ್ನಾಳ