ದಾವಣಗೆರೆ: ವಕ್ಫ್, ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಫೇಸ್‌ಬುಕ್ ಲೈವ್‌ನಲ್ಲಿ ನಿಂದನೆ ಮಾಡುವ ಭರದಲ್ಲಿ ಮುಸ್ಲಿಂ ಮತಕ್ಕೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಇಮ್ರಾನ್ ಎಂಬುವರು ದೂರು ದಾಖಲಿಸಿದ್ದಾರೆ.
ನಮಾಜ್ ಸೇರಿದಂತೆ ನಮ್ಮ ಸಮುದಾಯದ ಧಾರ್ಮಿಕ ನಂಬಿಕೆಗಳು, ಆಚರಣೆಗಳ ಬಗ್ಗೆ ಪುನೀತ್ ಕೆರೆಹಳ್ಳಿ ನಿಂದಿಸಿದ್ದು, ಸಮುದಾಯನ್ನು ಹೀಯಾಳಿಸಿ ಮಾತನಾಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ದುರುದ್ದೇಶದಿಂದ ಹೀಗೆ ಮಾಡಿದ್ದು, ಪುನೀತ್ ಕೆರೆಹಳ್ಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಇಮ್ರಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ.