ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

0
19

ಬೆಳ್ತಂಗಡಿ: ಹಿರಿಯ ಅನುಭವಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇಂದು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪದುವೆಟ್ಟು ನಿವಾಸಿಯಾಗಿದ್ದರು, ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರ ಭುವನೇಂದ್ರ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆ ನೋವು ಮತ್ತು ವಾಂತಿಯಿಂದ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ನವೆಂಬರ್ 19 ರಂದು ಅವರು ಕೊನೆಯುಸಿರೆಳೆದರು. ಹಿರಿಯ ಅನುಭವಿ ಪತ್ರಕರ್ತ ಬೆಳ್ತಂಗಡಿ ತಾಲೂಕಿನ ಪದುವೆಟ್ಟು ನಿವಾಸಿ ಭುವನೇಂದ್ರ ಪುದುವೆಟ್ಟು ಕನ್ನಡ ಜನಾಂತರಂಗದಿಂದ ವೃತ್ತಿ ಆರಂಭಸಿ, ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು, ಕಳೆದ 6 ತಿಂಗಳಿನಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಪ್ರಧಾನ ವರದಿಗಾರರಾಗಿ ನಿರ್ವಹಿಸುತ್ತಿದ್ದರು.
ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತಾ, ಇಬ್ಬರು ಪುತ್ರಿಯರನ್ನು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ. ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ನ. 19ರ ಮಂಗಳವಾರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

Previous articleವಾಹನಗಳ ಮೇಲೆ ಕಲ್ಲು ತೂರಿ ದರೋಡೆಗೆ ಯತ್ನ
Next articleನಂಜುಕಾರುವ ದ್ವೇಷದ ಮಾತುಗಳನ್ನು ಒಪ್ಪಲಾರೆವು