ಬಿಪಿಎಲ್‌ ಕಾರ್ಡ್‌ಗೆ ಯಾರು ಅರ್ಹರಿದ್ದಾರೆ ಅವರ ಕಾರ್ಡ್‌ ರದ್ದಾಗಲ್ಲ

0
10

ಬೆಂಗಳೂರು: ಬಿಪಿಎಲ್‌ ಕಾರ್ಡ್‌ಗೆ ಯಾರು ಅರ್ಹರಿದ್ದಾರೆ ಅವರ ಕಾರ್ಡ್‌ ರದ್ದಾಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು ‘ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿ ‘ಬಿಪಿಎಲ್, ಎಪಿಎಲ್ ಅಂದರೇನು ? ಬಡತನ ರೇಖೆಗಿಂತ ಕೆಳಗಿರುವವರು ಎಂದು. ಶ್ರೀಮಂತರು, ಆದಾಯ ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್‌ಗೆ ಅರ್ಹರಲ್ಲ. ಅವರಿಗೆ ಎಪಿಎಲ್ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ’ ಎಂದರು. ‘ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ’ ಎಂದರು.

Previous articleಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್
Next articleಇಂದಿರಾ ಗಾಂಧಿಯವರ ದಿಟ್ಟತನ-ಹೋರಾಟ-ಬದುಕು ನಮಗೆ ಆದರ್ಶ