ಬೀದಿ ಬದಿ ವ್ಯಾಪಾರಿಗೆ ಹಫ್ತಾ ಕಿರುಕುಳ

0
32

ಮಂಗಳೂರು: ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಹಫ್ತಾ ವಸೂಲಿ ಹೆಸರಲ್ಲಿ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.
ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಥಳೀಯ ಮಾಜಿ ಕಾರ್ಪೊರೇಟರ್ ಓರ್ವರ ಹೆಸರು ಇದರ ಹಿಂದೆ ಇದ್ದು ಹಫ್ತಾ ವಸೂಲಿ ಮಾಡುತ್ತಿರುವ ಬಗ್ಗೆ ಚಂದ್ರಹಾಸ್ ಪೂಜಾರಿ ವಿಡಿಯೋ ಮೂಲಕ ಚಿತ್ರಿಸಿದ ಹೇಳಿಕೆಯ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಪ್ರಶ್ನಿಸಲು ಬಂದ ಅಳಪೆ ವಾರ್ಡ್ ಮಹಿಳೆಯೊಬ್ಬರು ಅಂಗವಿಕಲ ಬೀದಿ ವ್ಯಾಪಾರಿ ತರಾಟೆಗೆ ತೆಗೆದುಕೊಂಡಾಗ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Previous articleರಾಜ್ಯದಲ್ಲಿ ಟಿಪ್ಪು, ಮೊಘಲ್ ಮಾದರಿಯ ದುರಾಡಳಿತ
Next articleಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ