ಭ್ರಷ್ಟಾಚಾರದ ಹಣ ಚೆಲ್ಲಿ ಕಾಂಗ್ರೆಸ್ ಗೆದ್ದಿದೆ

0
10

ದಾವಣಗೆರೆ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪ ಚುನಾವಣೆಯನ್ನು ಭ್ರಷ್ಟಾಚಾರದಿಂದ ಲೂಟಿ ಹೊಡೆದ ಹಣವನ್ನು ಚೆಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದಿಂದ ಹಣ ಲೂಟಿ ಮಾಡಿದ್ದನ್ನು ಚೆಲ್ಲಿ, ಗೆದ್ದಿದೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿರುವುದಕ್ಕೆ ಜನಾದೇಶ ನಮ್ಮ ವಿರುದ್ಧವಿದೆ ಅಂತಾ ನಾನು ಹೇಳುವುದಿಲ್ಲ ಎಂದರು.
ಉಪ ಚುನಾವಣೆ ಫಲಿತಾಂಶದಿಂದ ನಮ್ಮ ಕಾರ್ಯಕರ್ತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಯಾರೂ ಸಹ ಮನಸ್ಸಿಗೆ ನೋವುಂಟು ಮಾಡಿಕೊಳ್ಳಬಾರದು. ನಮ್ಮ ಪಕ್ಷ, ನಾವೆಲ್ಲರೂ ಕಾರ್ಯಕರ್ತರೊಂದಿಗೆ ಇದ್ದೇವೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ನಮ್ಮೆಲ್ಲಾ ಕಾರ್ಯಕರ್ತರು, ಮುಖಂಡರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.
ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮರ್ಮಾಘಾತವಾಗಿದೆ. ನಮ್ಮ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿದ್ದು, ಹೇಗೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹಣಬಲ, ತೋಳ್ಬಲ, ಅಧಿಕಾರ ಬಲದಿಂದ, ಭ್ರಷ್ಟಾಚಾರದಿಂದ ಲೂಟಿ ಹೊಡೆದ ಹಣವನ್ನು ಚೆಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಅವರು ಹೇಳಿದರು.

Previous articleಗ್ಯಾರಂಟಿ ಫಲಪ್ರದವಾಗಿರುವುದಕ್ಕೆ ಫಲಿತಾಂಶ ಸಾಕ್ಷಿ
Next articleಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು