Home Advertisement
Home ಅಪರಾಧ ಮೂವರು ಪೆಡ್ಲರ್‌ಗಳ ಬಂಧನ: ಒಂದೂವರೆ ಲಕ್ಷ ಮೌಲ್ಯದ ಎಂಡಿಎ ವಶ

ಮೂವರು ಪೆಡ್ಲರ್‌ಗಳ ಬಂಧನ: ಒಂದೂವರೆ ಲಕ್ಷ ಮೌಲ್ಯದ ಎಂಡಿಎ ವಶ

0
114

ಉಳ್ಳಾಲ: ನಿಷೇಧಿತ ಎಂಡಿಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎಂಡಿಎ ವಶ ಪಡಿಸಿಕೊಂಡ ಘಟನೆ ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಬಂಧಿತ ಆರೋಪಿಗಳು.
ಸೋಮವಾರದಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರುವಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಕಾರಿನಲ್ಲಿ ಎಂಡಿಎ ಪದಾರ್ಥ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರಿಂದ 1.50.000 ರೂ. ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎ ಮಾದಕ ವಸ್ತುವನ್ನು ಹಾಗೂ ಮಾರಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ಬೊಲೆನೋ ಕಾರು ಮತ್ತು 3 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಸೊತ್ತಿನ ಒಟ್ಟು ಮೌಲ್ಯ 7.76,980 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕೊಲ್ಲೂರಿಗೆ ನಟ ಸೂರ್ಯ ದಂಪತಿ
Next articleಪತ್ನಿ ಶೀಲ ಶಂಕಿಸಿ ಕೊಲೆ: ಆರೋಪಿ ಬಂಧನ