ಮೋದಿಯವರಿಗಿಂತ ದೊಡ್ಡವರಾಗಿದ್ದೀರಾ ಯತ್ನಾಳ್…

0
29

ಕೋಲಾರ: ಸಂಘರ್ಷಕ್ಕೆ ಇಳಿಯಲು ನಿಮಗೆ ಅನುಮತಿ ಕೊಟ್ಟ ರಾಷ್ಟ್ರೀಯ ನಾಯಕರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಾ ದೊಡ್ಡವನಾಗಿದ್ದೀರಾ’ ಎಂದು ಯತ್ನಾಳ್ ಅವರನ್ನು ಎಂ.ಪಿ.ರೇಣುಖಾಚಾರ್ಯ ಪ್ರಶ್ನಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು ವಕ್ಪ್ ಹೋರಾಟಕ್ಕಾಗಿ ಕೇಂದ್ರ ಸಚಿವರಾದ ಶೋಭಾ, ಪ್ರಹ್ಲಾದ್ ಜೋಷಿ ಬೆಂಬಲ ಕೊಟ್ಟಿದ್ದಾರೆ ವಿನಃ ನಿಮಗಲ್ಲ. ಪರ್ಯಾಯ ನಾಯಕತ್ವ ಸೃಷ್ಟಿಗೆ ಬೆಂಬಲ ಕೊಟ್ಟರಾ? ಪಕ್ಷ ಚಿಹ್ನೆ ನಿಮಗೆ ಕೊಟ್ಟವರು ಯಾರು? ವಿನಾಕಾರಣ ಸಂಘರ್ಷಕ್ಕೆ ಇಳಿದಿದ್ದೀರಿ. ನಿನಗೆ ತಾಕತ್ ಇದ್ದರೆ ಯಾರು ಆ ರಾಷ್ಟ್ರೀಯ ನಾಯಕ ನಿನಗೆ ಅನುಮತಿ ಕೊಟ್ಟರು ಹೇಳು? ನಿಮ್ಮ ನಡವಳಿಕೆ ಸರಿಯಾಗಿಲ್ಲ, ಬರುವ ದಿನಗಳಲ್ಲಿ ಅವರು ಬಾಯಿ ಮುಚ್ಚಿಕೊಂಡು ಸುಮ್ಮನಿರದಿದ್ದರೆ ನಾವು ಬೀದಿಗೆ ಬರಬೇಕಾಗುತ್ತದೆ, ವರಿಷ್ಠರ ಭೇಟಿ ಮಾಡಿ ನಿಮ್ಮ ಉಚ್ಚಾಟನೆಗೆ ಒತ್ತಾಯ ಮಾಡಬೇಕಾಗುತ್ತದೆ ಎಂದರು.

Previous articleತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ: ಡಿ.2ರಂದು ಶಂಕುಸ್ಥಾಪನೆ
Next articleಉತ್ತರ ಕರ್ನಾಟಕದ ಚರ್ಚೆಗೆ ವಿಪಕ್ಷಗಳ ಸಹಕಾರ ಅಗತ್ಯ