ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆ ನಿಷೇಧ

0
33

ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ತಟ್ಟಿದೆ. ಜಿಲ್ಲೆಯಾದ್ಯಂತ ದಿನಪೂರ್ತಿ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣವಿದ್ದು, ಡಿ. ೩ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀನುಗಾರಿಕೆ ನಿಷೇಧ:
ಪ್ರತಿಕೂಲ ವಾತಾವರಣದ ಹಿನ್ನೆಲೆಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಬೋಟ್‌ಗಳು ಕೂಡಲೇ ಹಿಂತಿರುಗುವಂತೆ ಸೂಚಿಸಲಾಗಿದೆ. ಪ್ರವಾಸಿಗರು ಬೀಚ್‌ಗಳಿಗೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ.
ಕಾಸರಗೋಡು ವರದಿ:
ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಡಿ. ೩ರಂದು ಜಿಲ್ಲಾಧಿಕಾರಿ ಕೆ. ಇಂಬುಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ.

Previous articleಮಂಗಳೂರು: ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ
Next articleರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ