ಬೀದರ್ : ಹಿಂದು ರಾಷ್ಟ್ರೀಯ ಜಾಗರಣ ಸಮಿತಿಯಿಂದ ಇಂದು ಸಂಜೆ 4 ಗಂಟೆಗೆ ಹಮ್ಮಿಕೊಂಡಿದ್ದ ಬೃಹತ್ ಹಿಂದು ಜಾಗೃತಿ ಸಮಾವೇಶಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಜಿಲ್ಲಾಡಳಿತದ ಈ ಆದೇಶ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಮಾವೇಶದಲ್ಲಿ ಪ್ರಮುಖ ಭಾಷಣ ಮಾಡಬೇಕಿದ್ದ ಹಿಂದು ಫೈರ್ ಬ್ರಾಂಡ್ ಎನಿಸಿರುವ ಹೈದರಾಬಾದ್ ನ ಮಾಧವಿ ಲತಾ, ರಾಜಸ್ಥಾನದ ಕಾಜೋಲ್ ಹಿಂದುಸ್ತಾನಿ ಹಾಗೂ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಬೀದರ್ ಜಿಲ್ಲೆಯ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಇವರೆಲ್ಲರೂ ಕೋಮು ದ್ವೇಷದ ಭಾಷಣ ಮಾಡುತ್ತಾರೆ. ಒಂದು ಸಮಾಜದ ವಿರುದ್ದ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ, ಘರ್ಷಣೆ, ಗಲಭೆಗೆ ಪ್ರಚೋದನೆ ನೀಡುತ್ತಾರೆ. ಹೀಗಾಗಿ ಶಾಂತಿ, ಕಾನೂನು ಹಾಗೂ ಸುವ್ಯವಸ್ಥೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಇವರ ಬೀದರ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.