ಗ್ಯಾಸ್ ಟ್ಯಾಂಕರಿನಿಂದ ಅನಿಲ ಸೋರಿಕೆ

0
111

ಉಳ್ಳಾಲ:ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರಿನಿಂದ ಹೈಡ್ರಾಲಿಕ್‌ ಆಸಿಡ್‌ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್‌ ಪಿಎಲ್‌ ತಂಡ ಮತ್ತು ಅಗ್ನಿ ಶಾಮಕ ದಳದವರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್‌ ಆಸಿಡ್‌ ಸಾಗಿಸುತ್ತಿದ್ದ ಟ್ಯಾಂಕರಿನಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರಿನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನಸವಾರರಿಗೆ ನೀಡಿಲ್ಲ.

Previous articleಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸರಕಾರ ಮೌನ ಯಾಕೆ?
Next articleಬಾಣಂತಿಯರು, ಹಸಿಗೂಸುಗಳ ಸಾವಿನ ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ